ಕರ್ನಾಟಕ

karnataka

ETV Bharat / bharat

ನಿಲ್ಲದ ಕಾಮುಕರ ಅಟ್ಟಹಾಸ : 50 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ - ಉತ್ತರಪ್ರದೇಶದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರಪ್ರದೇಶದಲ್ಲಿ ದುಷ್ಕರ್ಮಿಗಳು 50 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಹತ್ಯೆ ಮಾಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ನಾಲ್ಕು ತಂಡಗಳನ್ನು ರಚಿಸಿ ಶೋಧ ಕಾರ್ಯ ಮುಂದುವರೆಸಿದೆ.

ಹತ್ಯೆ
ಹತ್ಯೆ

By

Published : Jan 6, 2021, 12:41 PM IST

Updated : Jan 6, 2021, 12:55 PM IST

ಬದೌನ್ (ಉತ್ತರ ಪ್ರದೇಶ): 50 ವರ್ಷದ ಅಂಗನವಾಡಿ ಕಾರ್ಯಕರ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಬದೌನ್​​​ ಜಿಲ್ಲೆಯ ಉಘೈಟಿಯಲ್ಲಿ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಎಸ್​ಎಸ್​ಪಿ ಸಂಕಲ್ಪ್ ಶರ್ಮಾ, ಉಘೈಟಿ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ಹಾಗೂ ಸಂಬಂಧಿಕರ ದೂರಿನ ಆಧಾರದ ಮೇಲೆ ಸೆಕ್ಷನ್ 376ರ ಅಡಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

Last Updated : Jan 6, 2021, 12:55 PM IST

ABOUT THE AUTHOR

...view details