ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆದಿದ್ದು, ಸಂಜೆ 5 ಗಂಟೆಯವರೆಗೆ ಶೇ.57.79 ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಚುನಾವಣಾ ಆಯೋಗವು ಹೊರಡಿಸಿದ ಕೋವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಇಂದು ಬೆಳಗ್ಗೆ 7 ಗಂಟೆಗೆ ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿತ್ತು.
ಮೊದಲ ಹಂತದಲ್ಲಿ 623 ಅಭ್ಯರ್ಥಿಗಳು ಕಣದಲ್ಲಿದ್ದು, ಈ ಹಂತದಲ್ಲಿ ಸುಮಾರು 2.27 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದರು. ಆದರೆ ಕೇವಲ ಶೇ.57.79 ರಷ್ಟು ಮತದಾನವಾಗಿದೆ. ಲೋನಿ ಕ್ಷೇತ್ರದಲ್ಲಿ ಅತಿಹೆಚ್ಚು ಅಂದರೆ ಶೇ.57.60 ರಷ್ಟು ವೋಟಿಂಗ್ ಆಗಿದೆ.
ಇದನ್ನೂ ಓದಿ: ಮತದಾರರು ತಪ್ಪು ಮಾಡಿದ್ರೆ ಯುಪಿ ಕಾಶ್ಮೀರ, ಬಂಗಾಳ ಆಗಬಹುದು: ಯೋಗಿ ಆದಿತ್ಯನಾಥ್
403 ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಮಾರ್ಚ್ 7ರ ವರೆಗೆ ಏಳು ಹಂತಗಳಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.