ಬಂಡಿಪೋರಾ(ಶ್ರೀನಗರ): ಬಂಡಿಪೋರಾ ಜಿಲ್ಲೆಯ ಸುಂಬಲ್ ಪ್ರದೇಶದಲ್ಲಿ ಇಂದು ಸಂಜೆ ನಡೆದ ರಸ್ತೆ ಅಪಘಾತವೊಂದರಲ್ಲಿ ಆರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. 164 BN e-coy ಬೆಟಾಲಿಯನ್ಗೆ ಸೇರಿದ್ದ ಯೋಧರು ಗಾಯಗೊಂಡಿದ್ದಾರೆ.
ರಸ್ತೆ ಅಪಘಾತದಲ್ಲಿ ಆರು ಯೋಧರಿಗೆ ಗಾಯ ಯೋಧರು ಪ್ರಯಾಣಿಸುತ್ತಿದ್ದ ವಾಹನ ವಸ್ಕುರಾ ಬಳಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಯೋಧರನ್ನು ಚಿಕಿತ್ಸೆಗೋಸ್ಕರ ಜೆವಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಆತ್ಮಾಹುತಿ ದಾಳಿ: ಇಬ್ಬರು ಉಗ್ರರು ಖತಂ, ಮೂವರು ಯೋಧರು ಹುತಾತ್ಮ
ಮತ್ತೊಂದೆಡೆ ಶ್ರೀನಗರದಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿರುವ ಪರಿಣಾಮ ಓರ್ವ ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಮ್ಮು- ಕಾಶ್ಮೀರದ ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶ್ರೀನಗರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.