ಭುವನೇಶ್ವರ (ಒಡಿಶಾ): ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಆರು ಜನರು ಸಾವನ್ನಪ್ಪಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿಗೆ ಮಾಹಿತಿ ನೀಡಿದೆ.
ವರದಿಗಳ ಪ್ರಕಾರ, ಕೇಂದ್ರಪಾರ ಜಿಲ್ಲೆಯಲ್ಲಿ ಗೋಡೆ ಕುಸಿತದಿಂದ ಮೂವರು ಸಾವನ್ನಪ್ಪಿದ್ದಾರೆ. ಖೋರ್ಧಾ ಜಿಲ್ಲೆಯಲ್ಲಿ ಓರ್ವರು ಮುಳುಗಿದ್ದಾರೆ. ಇನ್ನಿಬ್ಬರು ಗಂಜಾಂ ಮತ್ತು ಸಬರ್ನ್ಪುರದಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.