ರಾಯ್ಗಂಜ್(ಪಶ್ಚಿಮಬಂಗಾಳ):ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್ಗಂಜ್ನಲ್ಲಿ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಪರಿಣಾಮ 6 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದಾರೆ.
6 ಮಂದಿಯ ಶವಗಳನ್ನು ಹೊಂಡಕ್ಕೆ ಬಿದ್ದ ಬಸ್ನಿಂದ ಹೊರ ತೆಗೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸನಾ ಅಖ್ತರ್ ಖಚಿತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 34ರಲ್ಲಿ ನಿನ್ನೆ ರಾತ್ರಿ 10:45ರ ಸುಮಾರಿಗೆ ರಾಯ್ಗಂಜ್ನ ರೂಪಹಾರ್ ಪ್ರದೇಶದ ಬಳಿ ಈ ದುರಂತ ಸಂಭವಿಸಿದೆ.