ಕರ್ನಾಟಕ

karnataka

Kinnaur Landslide: ಮತ್ತೆ ಆರು ಮೃತದೇಹಗಳು ಹೊರಕ್ಕೆ.. ಸಾವಿನ ಸಂಖ್ಯೆ 23ಕ್ಕೇರಿಕೆ

ಕಿನ್ನೌರ್​ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಮೃತರ ಸಂಖ್ಯೆ 23 ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

By

Published : Aug 14, 2021, 5:34 PM IST

Published : Aug 14, 2021, 5:34 PM IST

Kinnaur Landslide
Kinnaur Landslide

ಶಿಮ್ಲಾ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಇನ್ನೂ ಆರು ಶವಗಳನ್ನು ಹೊರತೆಗೆಯಲಾಗಿದ್ದು, ಮೃತರ ಸಂಖ್ಯೆ 23 ಕ್ಕೇರಿದೆ.

ನಿಚಾರ್ ತಹಸಿಲ್‌ನ ರಾಷ್ಟ್ರೀಯ ಹೆದ್ದಾರಿ 5ರ ಚೌರಾ ಗ್ರಾಮದಲ್ಲಿ ಅವಶೇಷಗಳಡಿಯಿಂದ ಆರು ಶವಗಳನ್ನು ಹೊರತೆಗೆಯಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ತಿಳಿಸಿದ್ದಾರೆ.

ಈ ಮಧ್ಯೆ ಭೂ ಕುಸಿತ ಸಂಭವಿಸಿದ ಪ್ರದೇಶದಲ್ಲಿ ಭಾರಿ ಗಾತ್ರದ ಬಂಡೆಗಳು ಬೀಳುತ್ತಿರುವುದು ನಿರಂತರವಾಗಿ ಮುಂದುವರೆದಿದೆ. ಈ ಹಿನ್ನೆಲೆ ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೂ ಎಲ್ಲ ವಿಧದ ವಾಹನಗಳ ಸಂಚಾರ ನಿರ್ಬಂಧಿಸಿ ನಿಚಾರ್ ಉಪ - ವಿಭಾಗೀಯ ಮ್ಯಾಜಿಸ್ಟ್ರೇಟ್ ಮನಮೋಹನ್ ಸಿಂಗ್ ಆದೇಶಿಸಿದ್ದಾರೆ.

ಶುಕ್ರವಾರ ಸಂಜೆ ಕಲ್ಲುಗಳು ಬಿದ್ದ ಬಳಿಕ ಇಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಆರು ಗಂಟೆಯಿಂದಲೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಅವಶೇಷಗಳಡಿ ಸಿಲುಕಿರುವ ಎಸ್ ಯುವಿ ಕಾರು ಮತ್ತು ಅದರೊಳಗಿದ್ದ ಪ್ರಯಾಣಿಕರು ಈವರೆಗೂ ಪತ್ತೆಯಾಗಿಲ್ಲ, ಎನ್​ಡಿಆರ್ ಎಫ್ ಮತ್ತು ಐಟಿಬಿಪಿ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸ್, ಗೃಹ ರಕ್ಷಕದಳದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮುಕ್ತಾ ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲೂ ಭೂ ಕುಸಿತ

ಇತ್ತ ಅರುಣಾಚಲ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ ಪಾಸಿಘಾಟ್, ಪ್ಯಾಂಗಿನ್ ಮತ್ತು ಆಲೋ ನಡುವೆ ಸಂಪರ್ಕ ಸ್ಥಗಿತಗೊಂಡಿದೆ. ಭಾರಿ ಭೂ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ 13 ಕೊಚ್ಚಿ ಹೋಗಿದೆ ಎಂದು ಪಾಸಿಘಾಟ್ ಅಧಿಕಾರಿ ತಿಳಿಸಿದ್ದಾರೆ. ಆದರೆ, ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ: ಬೆಟ್ಟದಿಂದ ಉರುಳುತ್ತಿದೆ ಕಲ್ಲು,ಮಣ್ಣು: ಹಿಮಾಚಲದಲ್ಲಿ ಕಾರ್ಯಾಚರಣೆಗೆ ಸ್ಥಗಿತಗೊಳಿಸಿದ ಸಿಬ್ಬಂದಿ

ABOUT THE AUTHOR

...view details