ಮುಂಬೈ: ಮುಂಬೈನ ಒಶಿವಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಮುಂಬೈನಲ್ಲಿ ಕಾಮುಕನ ಅಟ್ಟಹಾಸ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ - ಮುಂಬೈನ ಒಶಿವಾರಾ ಪೊಲೀಸ್ ಠಾಣೆ
ಮುಂಬೈನಲ್ಲಿ 6 ವರ್ಷದ ಬಾಲಕಿಯ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಬಾಲಕಿ ತಾಯಿಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
![ಮುಂಬೈನಲ್ಲಿ ಕಾಮುಕನ ಅಟ್ಟಹಾಸ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ 6-year-old girl raped in Mumbai](https://etvbharatimages.akamaized.net/etvbharat/prod-images/768-512-11603296-thumbnail-3x2-vis.jpg)
6 ವರ್ಷದ ಬಾಲಕಿ ಮೇಲೆ ಅತ್ಯಾಚಾರ
6 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಬಾಲಕಿಯ ತಾಯಿ ಹೇಳಿಕೆ ಆಧಾರದ ಮೇಲೆ ಸೆಕ್ಷನ್ 376ರ ಪೋಕ್ಸೋ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಒಂದೇ ಕಟ್ಟಡದಲ್ಲಿ ವಾಸವಾಗಿದ್ದ ಆರೋಪಿ, ಬಾಲಕಿ ಆಟವಾಡುವ ಸಮಯದಲ್ಲಿ ಪುಸಲಾಯಿಸಿ ಈ ಕೃತ್ಯ ಎಸಗಿದ್ದಾನೆ.
ಕೃತ್ಯ ಎಸಗಿದ್ದ ಪಾಪಿ ಸ್ಥಳದಿಂದ ಪರಾರಿಯಾಗಿದ್ದ. ತಾಯಿ ಬಳಿ ಮಗಳು ಅಳುತ್ತ ಬಂದಾಗ ದೇಹದ ಖಾಸಗಿ ಭಾಗದಲ್ಲಿ ರಕ್ತಸ್ರಾವವಾಗಿತ್ತು. ಇದನ್ನು ಕಂಡ ಬಾಲಕಿಯ ತಾಯಿ ಸಂಬಂಧಿಗಳಿಗೆ ತಿಳಿಸಿ ನಂತರ ದೂರು ದಾಖಲಿಸಿದ್ದಾಳೆ. ಈ ಹಿನ್ನೆಲೆ ಅತ್ಯಾಚಾರ ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.