ಕರ್ನಾಟಕ

karnataka

ETV Bharat / bharat

Watch -'ಮಹಾ' ಪ್ರವಾಹದಲ್ಲಿ ಕೊಚ್ಚಿ ಹೋದ 60 ರಿಂದ 70 ಜಾನುವಾರುಗಳು.. - cattle swept away in flood water

ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿ ಸುಮಾರು 60 ರಿಂದ 70 ಜಾನುವಾರುಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

cows swept away in the Yavatmal flood
cows swept away in the Yavatmal flood

By

Published : Oct 5, 2021, 12:23 PM IST

ಯಾವತ್ಮಲ್‌ (ಮಹಾರಾಷ್ಟ್ರ): ಕಳೆದೊಂದು ತಿಂಗಳಿನಿಂದ ಮಹಾರಾಷ್ಟ್ರದ ಅನೇಕ ಭಾಗಗಳಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು, ಈವರೆಗೆ 70ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಯಾವತ್ಮಲ್ ಜಿಲ್ಲೆಯಲ್ಲೂ ವರುಣ ಆರ್ಭಟಿಸುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಜಿಲ್ಲೆಯ ಮಹಾಗಾಂವ್​ ತಾಲೂಕಿನ ಬೆಲ್ದಾರಿ ಪ್ರದೇಶದಲ್ಲಿನ ಎಲ್ಲಾ ಕೆರೆಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಸುಮಾರು 60 ರಿಂದ 70 ಜಾನುವಾರುಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಪ್ರವಾಹದಲ್ಲಿ ಕೊಚ್ಚಿ ಹೋದ ಜಾನುವಾರುಗಳು

ನಿನ್ನೆ ಸಂಜೆ ಜಾನುವಾರು ಕಾಯುವ ವ್ಯಕ್ತಿ ಅವುಗಳನ್ನು ತನ್ನ ಗ್ರಾಮಕ್ಕೆ ಕರೆದುಕೊಂಡು ಹೋಗುವ ವೇಳೆ ನಾಲೆಯನ್ನು ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ಪೈಕಿ 40 ಹಸುಗಳನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

ಇದನ್ನೂ ಓದಿ: Watch.. ಮಹಾರಾಷ್ಟ್ರ: ಮಳೆ ಅವಾಂತರಕ್ಕೆ 1 ತಿಂಗಳಲ್ಲಿ 70ಕ್ಕೂ ಹೆಚ್ಚು ಮಂದಿ ಬಲಿ

ರಾಜ್ಯದ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಜನವರಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಪ್ರವಾಹ, ಭೂಕುಸಿತ, ಮಳೆ, ಸಿಡಿಲು ಸಂಬಂಧದ ಅವಘಡಗಳಿಂದ 400ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.

ABOUT THE AUTHOR

...view details