ಅಹಮದಾಬಾದ್(ಗುಜರಾತ್):ಮೀನುಗಾರಿಕೆಯಲ್ಲಿ ತೊಡಗಿರುವ ಸುಮಾರು 100 ಮುಸ್ಲಿಂ ಕುಟುಂಬಗಳು ದಯಾಮರಣ ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. 2016 ರಿಂದ ಪೋರಬಂದರ್‌ನ ಗೋಸಾಬರ ಬಂದರಿನಲ್ಲಿ ದೋಣಿ ನಿಲುಗಡೆಯನ್ನು ಸರ್ಕಾರ ನಿಷೇಧಿಸಿದೆ. ಈ ನಿಷೇಧದಿಂದ ತೊಂದರೆಗೀಡಾದವರಿಗೆ ದಯಾಮರಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮೀನುಗಾರಿಕೆ ಮತ್ತು ಬೋಟಿಂಗ್ ಪರವಾನಗಿ ಇದ್ದರೂ ಅವರ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ ಈ ಕುಟುಂಬಗಳು ಆರೋಪಿಸಿವೆ. ಈ ನಿಟ್ಟಿನಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿಗಳು, ಪೋರಬಂದರ್ ಜಿಲ್ಲಾಧಿಕಾರಿಗೆ ಜ್ಞಾಪಕ ಪತ್ರವನ್ನೂ ಸಹ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿ ಸಂತ್ರಸ್ತರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.