ಸಿಂಧುದುರ್ಗ್: ಗೋವಾದಲ್ಲಿ ಶುಕ್ರವಾರ 61 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ. ಪರಿಣಾಮ, ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ ಸುಮಾರು 2,000ಕ್ಕೆ ಏರಿದೆ.
ಗೋವಾದಲ್ಲಿ ಒಂದೇ ದಿನ 61 ಮಂದಿ ಕೊರೊನಾ ಸೋಂಕಿತರು ಸಾವು - covid patients dies in goa
ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ಒಂದು ದಿನದಲ್ಲಿ 61 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ..
covid
ಗುರುವಾರ ಮತ್ತು ಶುಕ್ರವಾರದ ನಡುವಿನ 24 ಗಂಟೆಗಳಲ್ಲಿ 2,455 ಹೊಸ ಪ್ರಕರಣ ಪತ್ತೆಯಾಗಿವೆ. 2,960 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾದಿಂದ ಸಂಭವಿಸಿದ ಸಾವುಗಳ ಸಂಖ್ಯೆ 1,998 ಕ್ಕೆ ಏರಿದೆ.
ಈ ಮಧ್ಯೆ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರು ಒಂದು ದಿನದಲ್ಲಿ 61 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಗೋವಾ ವೈದ್ಯಕೀಯ ಬುಲೆಟಿನ್ ಪ್ರಕಾರ, ಕೊರೊನಾದಿಂದ ಗುಣಮುಖರಾದವರ ಪ್ರಮಾಣವು ಶೇಕಡಾ 74.07 ಕ್ಕೆ ಏರಿದೆ.