ನವದೆಹಲಿ: ಕೊರೊನಾ ಮೂರನೇ ಅಲೆಯ ಮಧ್ಯೆ ಇಂದು ಕೇಂದ್ರ ಹಣಕಾಸು ಬಜೆಟ್ ಮಂಡನೆಯಾಗುತ್ತಿದೆ. ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಸರ್ಕಾರ ಒತ್ತು ನೀಡಲಿದೆ.
ರಕ್ಷಣಾ ಉಪಕರಣಗಳ ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ದೇಶೀಯ ಉದ್ಯಮಕ್ಕೆ ಒತ್ತು ನೀಡಿ, ಇದಕ್ಕಾಗಿ ಶೇ 68 ರಷ್ಟು ಹೂಡಿಕೆ ಮಾಡಲಾಗುವುದು.
ಇದನ್ನೂ ಓದಿ:ಕೇಂದ್ರ ಬಜೆಟ್ 2022: ಹಣ್ಣು, ತರಕಾರಿ ಉತ್ಪಾದನಾ ಉತ್ತೇಜನಕ್ಕೆ ನೀತಿ
ದೇಶೀ ಕೈಗಾರಿಕೆಗಳಿಗೆ ಇನ್ನಷ್ಟು ಅವಕಾಶ ನೀಡಲಾಗುವುದು. ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಸರ್ಕಾರ ಒತ್ತು ನೀಡಲಿದೆ. ಡಿಆರ್ಡಿಒ ಸಹಯೋಗದಲ್ಲಿ ಸಂಶೋಧನೆಗಳನ್ನು ನಡೆಸಲು ಆಸಕ್ತರಿಗೆ ಅವಕಾಶ ನೀಡಲಿದೆ.
ಭದ್ರತೆಗೆ ಅಗತ್ಯವಿರುವ ಯುದ್ಧೋಪಕರಣಗಳೂ ಸೇರಿದಂತೆ ಎಲ್ಲ ಬಗೆಯ ಆಯುಧಗಳ ದೇಶೀ ಉತ್ಪಾದನೆಗೆ ಹೆಚ್ಚು ಒತ್ತು ನೀಡಲಾಗುವುದು. ಅಗತ್ಯ ಅನುಕೂಲಗಳನ್ನೂ ಕಲ್ಪಿಸಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.
ರಕ್ಷಣಾ ಬಜೆಟ್ ನ ಶೇ.35ರಷ್ಟು ಅನುದಾನ ಸಂಶೋಧನೆಗೆ ಮೀಸಲು. ರಕ್ಷಣಾ ಇಲಾಖೆಯಲ್ಲಿ ಖರೀದಿ ಮತ್ತು ಸಂಶೋಧನೆಗೆ ಖಾಸಗಿ ಸಹಭಾಗಿತ್ವ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ