ಥಾಣೆ(ಮಹಾರಾಷ್ಟ್ರ):ಮಹಾಮಾರಿ ಕೊರೊನಾ ಸಂಕಷ್ಟದ ಮಧ್ಯೆ ಮಹಾರಾಷ್ಟ್ರದ ಥಾಣೆಯಲ್ಲಿ ವಸತಿ ಕಟ್ಟಡವೊಂದರ ಮೇಲ್ಛಾವಣಿ ಕುಸಿದಿರುವ ಘಟನೆ ನಡೆದಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ.
ಥಾಣಾ ಮಹಾನಗರ ಪಾಲಿಕೆಯ ಉಲ್ಲಾಸ್ ನಗರದಲ್ಲಿ ಈ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಘಟನಾ ಸ್ಥಳದಲ್ಲಿ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಪಡೆ ಬಿಡುಬಿಟ್ಟಿದ್ದು, ರಕ್ಷಣಾ ಕಾರ್ಯಚರಣೆ ನಡೆಸುತ್ತಿವೆ. ಅವಶೇಷಗಳ ಅಡಿ 3-4 ಜನರು ಸಿಲುಕಿಹಾಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಅವರಿಗೋಸ್ಕರ ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ಪಾಲಿಕೆ ಮಾಹಿತಿ ನೀಡಿದೆ.