ಕರ್ನಾಟಕ

karnataka

ಕಾರು - ಟ್ರಕ್​ ನಡುವೆ ಭೀಕರ ಅಪಘಾತ: ಏಳು ಮಂದಿ ದುರ್ಮರಣ

By

Published : Jul 24, 2021, 12:57 PM IST

ಕಾರು - ಟ್ರಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಏಳು ಮಂದಿ ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ಸಂಭವಿಸಿದೆ.

ಏಳು ಮಂದಿ ದುರ್ಮರಣ
ಏಳು ಮಂದಿ ದುರ್ಮರಣ

ಪಾಟ್ನಾ: ಕಾರು ಮತ್ತು ಟ್ರಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗಯಾ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಗ್ಯಾಸ್​ ಕಟರ್​ ಬಳಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದೇವೆ ಎಂದು ತನಿಖಾ ಅಧಿಕಾರಿ ಎಸ್​.ಹೆಚ್​.ಕುಮಾರ್ ತಿಳಿಸಿದ್ದಾರೆ.

ಸ್ಥಳದಿಂದ ಪರಾರಿಯಾಗಿರುವ ಟ್ರಕ್​ ಚಾಲಕನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Cylinder Blast: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಏಳು ಮಂದಿ ಸಾವು

ABOUT THE AUTHOR

...view details