ಭಿಂದ್ (ಮಧ್ಯಪ್ರದೇಶ): ಬಸ್ ಹಾಗೂ ಡಂಪರ್ ನಡುವೆ ಡಿಕ್ಕಿಯಾಗಿ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 719ರಲ್ಲಿ ನಡೆದಿದೆ.
ಇಂದು ಬೆಳಗ್ಗೆ ಗ್ವಾಲಿಯರ್ನಿಂದ ಬರೇಲಿಗೆ ಹೋಗುತ್ತಿದ್ದ ಬಸ್ ಇದಾಗಿದ್ದು, ಗೋಹಾದ್ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇನ್ನೂ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಗೋಹಾದ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.