ಕರ್ನಾಟಕ

karnataka

ETV Bharat / bharat

ಸೇತುವೆ ಮೇಲಿಂದ 50 ಅಡಿ ಕೆಳಗೆ ಬಿದ್ದ ಕಾರು.. ಶಾಸಕನ ಮಗ ಸೇರಿ ಏಳು ವೈದ್ಯಕೀಯ ವಿದ್ಯಾರ್ಥಿಗಳು ದಾರುಣ ಸಾವು! - ರಸ್ತೆ ಅಪಘಾತದಲ್ಲಿ ಶಾಸಕ ಪುತ್ರ ಸಾವು

ಸೇತುವೆ ಮೇಲಿಂದ ಕಾರು ಕೆಳಗೆ ಬಿದ್ದು ಶಾಸಕನ ಮಗ ಸೇರಿ ಏಳು ಮೆಡಿಕಲ್​ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ.

7 killed as car falls under bridge in Maharashtra, medical student died in maharashtra road accident, mla son died in road accident, maharashtra road accident news, ಮಹಾರಾಷ್ಟ್ರದಲ್ಲಿ ಸೇತುವೆ ಮೇಲಿಂದ ಕಾರು ಬಿದ್ದು ಏಳು ಜನ ಸಾವು, ಮಹಾರಾಷ್ಟ್ರ ರಸ್ತೆ ಅಪಘಾತದಲ್ಲಿ ಮೆಡಿಕಲ್​ ವಿದ್ಯಾರ್ಥಿಗಳು ಸಾವು, ರಸ್ತೆ ಅಪಘಾತದಲ್ಲಿ ಶಾಸಕ ಪುತ್ರ ಸಾವು, ಮಹಾರಾಷ್ಟ್ರ ರಸ್ತೆ ಅಪಘಾತ ಸುದ್ದಿ,
ಶಾಸಕ ಮಗ ಸೇರಿ ಏಳು ವೈದ್ಯಕೀಯ ವಿದ್ಯಾರ್ಥಿಗಳು ದಾರುಣ ಸಾವು

By

Published : Jan 25, 2022, 8:27 AM IST

ವಾರ್ಧಾ:ಕಾರೊಂದು ಸೇತುವೆ ಮೇಲಿಂದ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಏಳು ಮೆಡಿಕಲ್​ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ವಾರ್ಧಾ-ಯವತ್ಮಾಲ್​ ಹೆದ್ದಾರಿಯಲ್ಲಿ ನಡೆದಿದೆ.

ಮೃತ 7 ಮಂದಿ ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳುದು ಬಂದಿದೆ. ಅಪಘಾತದಲ್ಲಿ ಗೊಂಡಿಯಾ ಜಿಲ್ಲೆಯ ತಿರೋಡಾ ಶಾಸಕ ವಿಜಯ್ ರಹಂಗ್‌ಡೇಲ್ ಅವರ ಪುತ್ರ ಆವಿಷ್ಕರ್ ಕೂಡ ಸಾವನ್ನಪ್ಪಿದ್ದಾರೆ.

ಶಾಸಕ ಮಗ ಸೇರಿ ಏಳು ವೈದ್ಯಕೀಯ ವಿದ್ಯಾರ್ಥಿಗಳು ದಾರುಣ ಸಾವು

ಓದಿ:ರೈಲಿನಿಂದ ಬಿದ್ದ ಪ್ರಯಾಣಿಕನನ್ನು ಕಾಪಾಡಿದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಸಿಬ್ಬಂದಿ! Video...

ಜಿಲ್ಲೆಯ ಸೆಲ್ಸುರಾ ಪ್ರದೇಶದಲ್ಲಿ ರಾತ್ರಿ 1.30ರ ಸುಮಾರಿಗೆ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಝೈಲೋ ಕಾರು ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದೆ. ಕಾರಿನಲ್ಲಿದ್ದ ಎಲ್ಲಾ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೊಂಡಿಯಾ ಜಿಲ್ಲೆಯ ತಿರೋಡಾ ಶಾಸಕ ವಿಜಯ್ ರಹಂಗ್‌ಡೇಲ್ ಅವರ ಪುತ್ರ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇತರ ಆರು ಮಂದಿ ವೈದ್ಯಕೀಯ ಕೋರ್ಸ್‌ಗಳಿಗಾಗಿ ದೇಶದ ವಿವಿಧ ಭಾಗಗಳಿಂದ ಬಂದವರು ಎಂದು ತಿಳಿದು ಬಂದಿದೆ.

ಶಾಸಕ ಮಗ ಸೇರಿ ಏಳು ವೈದ್ಯಕೀಯ ವಿದ್ಯಾರ್ಥಿಗಳು ದಾರುಣ ಸಾವು

ವಾಹನ ನಿಯಂತ್ರಣ ತಪ್ಪಿ, ಸೇತುವೆಯಿಂದ ಸುಮಾರು 50 ಅಡಿ ಕೆಳಗೆ ಉರುಳಿ ಬಿದ್ದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಓದಿ:ಬಸವಣ್ಣನವರ ಅನುಭವ ಮಂಟಪವನ್ನೇ ಮರುಸೃಷ್ಟಿಸಿ: ಸಿಎಂ ಬೊಮ್ಮಾಯಿ ಸೂಚನೆ

ಮೃತರನ್ನು ನೀರಜ್ ಚೌಹಾನ್ (ಪ್ರಥಮ ವರ್ಷದ MBBS), ನಿತೇಶ್ ಸಿಂಗ್ (2015 ಇಂಟರ್ನ್ MBAS), ವಿವೇಕ್ ನಂದನ್ (2018, MBBS ಅಂತಿಮ ವರ್ಷದ ಭಾಗ 1), ಪ್ರತ್ಯೂಷ್ ಸಿಂಗ್, (2017, MBBS ಅಂತಿಮ ವರ್ಷದ ಭಾಗ 2), ಶುಭಂ ಜೈಸ್ವಾಲ್ (2017 MBBS ಅಂತಿಮ ವರ್ಷದ ಭಾಗ 2), ಪವನ್ ಶಕ್ತಿ (2020, MBBS ಅಂತಿಮ ವರ್ಷದ ಭಾಗ 1) ಎಂದು ಗುರುತಿಸಲಾಗಿದೆ.

ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡಿದ್ದಾರೆ. ಬಳಿಕ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ದೌಡಾಯಿಸಿದ್ದಾರೆ. ಆಸ್ಪತ್ರೆ ಬಳಿ ಮೃತರ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.

ಶಾಸಕ ಮಗ ಸೇರಿ ಏಳು ವೈದ್ಯಕೀಯ ವಿದ್ಯಾರ್ಥಿಗಳು ದಾರುಣ ಸಾವು

ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details