ಕರ್ನಾಟಕ

karnataka

ETV Bharat / bharat

ಅಮರಾವತಿಯಲ್ಲಿ ಮತ್ತೊಂದು ಹೇಯ ಕೃತ್ಯ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ - Maharashtra rape case

ಗ್ರಾಮದ ಹೊರಗಿರುವ ಶೌಚಾಲಯಕ್ಕೆ ಹೋಗುತ್ತಿದ್ದ ಬಾಲಕಿಯನ್ನು ಬೈಕ್​ನಲ್ಲಿ ಬಂದು ಹೊತ್ತೊಯ್ದ ಕಾಮುಕ ಆಕೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ.

amravati rape case
amravati rape case

By

Published : Sep 12, 2021, 5:11 PM IST

ಅಮರಾವತಿ (ಮಹಾರಾಷ್ಟ್ರ):ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿಯೋರ್ವಳು ಮಾನಕ್ಕೆ ಹೆದರಿ ನಿನ್ನೆಯಷ್ಟೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿತ್ತು. ಇದೀಗ ಅದೇ ಜಿಲ್ಲೆಯಿಂದ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಅಮರಾವತಿ ಜಿಲ್ಲೆಯ ಅಂಜನಗಾಂವ ಸುರ್ಜಿ ತಾಲೂಕಿನ ವಂಜ ಎಂಬ ಗ್ರಾಮದಲ್ಲಿ 7 ವರ್ಷದ ಬಾಲಕಿ ಮೇಲೆ 20 ವರ್ಷದ ಯುವಕ ಅತ್ಯಾಚಾರ ಎಸಗಿದ್ದಾನೆ. ತನ್ನ ಸ್ನೇಹಿತರೊಂದಿಗೆ ಗ್ರಾಮದ ಹೊರಗಿರುವ ಶೌಚಾಲಯಕ್ಕೆ ಹೋಗುತ್ತಿದ್ದ ಬಾಲಕಿಯನ್ನು ಬೈಕ್​ನಲ್ಲಿ ಬಂದ ಆರೋಪಿ ಹೊತ್ತೊಯ್ದಿದ್ದಾನೆ. ತನ್ನದೇ ಸ್ವಂತ ಹೊಲಕ್ಕೆ ಆಕೆಯನ್ನು ಕರೆದೊಯ್ದು ಕೃತ್ಯ ಎಸಗಿದ್ದಾನೆ.

ಇದನ್ನೂ ಓದಿ: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡು ಸಾವು

ಸಂತ್ರಸ್ತೆಯ ತಾಯಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ.

ABOUT THE AUTHOR

...view details