ಬಲೋದಾ ಬಜಾರ್ (ಛತ್ತೀಸ್ಗಢ): ಜಿಲ್ಲೆಯಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆ ನಡೆದಿದೆ. ಬಾಲಕಿಯ ಮನೆ ಸಮೀಪವಿರುವ ಬಾವಿಯಲ್ಲಿ ಶವ ಪತ್ತೆಯಾಗಿದೆ.
ನಾಪತ್ತೆಯಾದ ಬಾಲಕಿಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ವೇಳೆ ಬಾಲಕಿ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ಇದನ್ನೂ ಓದಿ:ಹುಡುಗಿಯನ್ನು ಹಿಂಸಿಸುತ್ತಿರುವ ದುಷ್ಕರ್ಮಿಗಳ ವಿಡಿಯೋ ವೈರಲ್: ಜನರ ಸಹಾಯ ಕೋರಿದ ಅಸ್ಸೋಂ ಪೊಲೀಸರು
ಬಳಿಕ ಪ್ರತಿಕ್ರಿಯಿಸಿದ ಎಎಸ್ಪಿ ನಿವೇದಿತಾ ಪಾಲ್, ಪೌಸಾರಿ ಗ್ರಾಮದ 7 ವರ್ಷದ ಬಾಲಕಿಯ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು. ಅಪ್ರಾಪ್ತೆಗಾಗಿ ಶೋಧ ನಡೆಸುತ್ತಿದ್ದ ವೇಳೆ, ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಆಕೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದರು. ಅಲ್ಲದೆ, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚುವ ಭರವಸೆ ನೀಡಿದರು.