ಉದಯಪುರ(ರಾಜಸ್ಥಾನ) :ಕೊರೊನಾ ವೈರಸ್ ರೂಪಾಂತರಿ ಒಮಿಕ್ರಾನ್ ಸೋಂಕಿಗೊಳಗಾಗಿದ್ದ 73 ವರ್ಷದ ವೃದ್ಧನೋರ್ವ ಸಾವನ್ನಪ್ಪಿದ್ದಾನೆ. ರಾಜಸ್ಥಾನದ ಉದಯಪುರದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ವೃದ್ಧನ ಕೊರೊನಾ ವರದಿ ಎರಡು ಸಲ ನೆಗೆಟಿವ್ ಬಂದಿತ್ತು. ಕಳೆದ 25ರಂದು ಇವರ ಒಮಿಕ್ರಾನ್ ವರದಿ ಕೂಡ ಪಾಸಿಟಿವ್ ಬಂದಿತ್ತು. ವೃದ್ಧನಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆಗಳಿದ್ದವು ಎಂದು ವರದಿಯಾಗಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಒಮಿಕ್ರಾನ್ ಸೋಂಕಿಗೊಳಗಾಗಿರುವ ಈ ವೃದ್ಧನ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಆದರೆ, ಡಿಸೆಂಬರ್ 21 ಹಾಗೂ 22ರಂದು ಕೋವಿಡ್ ಪರೀಕ್ಷೆ ನಡೆಸಿದಾಗ ಅದು ಪಾಸಿಟಿವ್ ಬಂದಿತ್ತು. ಆದರೆ, ಇದಾದ ಬಳಿಕ ಅವರಿಗೆ ಮತ್ತೊಮ್ಮೆ ಕೊರೊನಾ ಟೆಸ್ಟ್ ನಡೆಸಿದಾಗ ನೆಗೆಟಿವ್ ಬಂದಿತ್ತು.