ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 734 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಸದ್ಯ ದೇಶದಲ್ಲಿ 12,307 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕು ಹರಡುವಿಕೆ ಪ್ರಮಾಣ ಶೇ 0.03 ರಷ್ಟಿದೆ. ಚೇತರಿಕೆ ದರ ಶೇ 98.78 ರಷ್ಟಿದೆ. ಸಾವಿನ ಪ್ರಮಾಣವು ಶೇ 1.19 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ 734 ಕೋವಿಡ್ ಸೋಂಕಿತರು ಪತ್ತೆ; ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ - ಕೇಂದ್ರ ಸಚಿವಾಲಯ ವೆಬ್ ಸೈಟ್
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 12307 ಕ್ಕೆ ಇಳಿದಿದೆ ಎಂದು ಭಾನುವಾರ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕರೋನವೈರಸ್
ಲಸಿಕೆ ನೀಡಿಕೆ:ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿ ಇದುವರೆಗೆ ದೇಶದಲ್ಲಿ 219.80 ಕೋಟಿ ಕೋವಿಡ್ ಲಸಿಕೆ ಡೋಸ್ ನೀಡಲಾಗಿದೆ.