ನವದೆಹಲಿ: 2020-21ನೇ ಹಣಕಾಸು ವರ್ಷದಲ್ಲಿ ಎಂದು ರಾಷ್ಟ್ರೀಯ ಪಕ್ಷಗಳು ಒಟ್ಟಾರೆ 1373.783 ಕೋಟಿ ರೂಪಾಯಿ ಆದಾಯ ಘೋಷಿಸಿವೆ. ಇದರಲ್ಲಿ ಬಿಜೆಪಿಯ ಪಾಲು ಸುಮಾರು ಶೇ.55ರಷ್ಟಿದೆ ಎಂದು ಸರಕಾರೇತರ ಚುನಾವಣಾ ವಿಶ್ಲೇಷಕ ಸಂಸ್ಥೆ ಅಸೋಸಿಯೇಶನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಮಾಡಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್, ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ), ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸಿಸ್ಟ್ (ಸಿಪಿಎಂ), ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ (ಎಐಟಿಸಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಇವೇ ಆ 8 ಪಕ್ಷಗಳಾಗಿವೆ.