ದೋಡಾ (ಜಮ್ಮು-ಕಾಶ್ಮೀರ):ಇಲ್ಲಿನಥಾತ್ರಿಯಿಂದ ದೋಡಾಗೆ ತೆರಳುತ್ತಿದ್ದ ಮಿನಿ ಬಸ್ ಆಳ ಕಂದಕಕ್ಕೆ ಉರುಳಿ ಬಿದ್ದು 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಥಾತ್ರಿ ಸಮೀಪ ನಡೆದಿದೆ.
ಜಮ್ಮು ಕಾಶ್ಮೀರದ ಥಾತ್ರಿಯಿಂದ ಮಿನಿ ಬಸ್ ದೋಡಾಗೆ ಪ್ರಯಾಣಿಸುತ್ತಿತ್ತು. ಥಾತ್ರಿಯಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.