ನಾಗ್ಪುರ (ಮಹಾರಾಷ್ಟ್ರ): ಉತ್ತರ ಪ್ರದೇಶದ ಲಖನೌನಿಂದ ಮಹಾರಾಷ್ಟ್ರದ ಮುಂಬೈಗೆ ವಿಮಾನದಲ್ಲಿ ತಂದೆಯೊಂದಿಗೆ ಪ್ರಯಾಣಿಸುತ್ತಿದ್ದ ಎಂಟು ವರ್ಷದ ಬಾಲಕಿ ಹೃದಯಾಘಾತದಿಂದಾಗಿ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ.
ಮೃತ ಬಾಲಕಿಯನ್ನು ಉತ್ತರ ಪ್ರದೇಶದ ಸಿದ್ದಾರ್ಥ್ ನಗರ ನಿವಾಸಿ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈಕೆಯನ್ನು ಚಿಕತ್ಸೆ ಕೊಡಿಸಲೆಂದು ಮುಂಬೈಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಮಾರ್ಗಮಧ್ಯೆ ಆರೋಗ್ಯ ಇನ್ನಷ್ಟು ಹದಗೆಟ್ಟಿದ್ದು, ಗೋ ಏರ್ (GoAir) ವಿಮಾನವನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಆದರೆ, ಬಾಲಕಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.