ಮಸ್ಸೂರಿ (ಉತ್ತರಾಖಂಡ):ಮಸ್ಸೂರಿಯ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಅಧ್ಯಾಪಕರು ಸೇರಿದಂತೆ ಐಎಎಸ್ ತರಬೇತಿ ಪಡೆಯುತ್ತಿರುವ ಒಟ್ಟು 84 ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಅಕಾಡೆಮಿಯ ಆಡಳಿತ ಮಂಡಳಿ ತಿಳಿಸಿದೆ.
ಕ್ಯಾಂಪಸ್‌ನಲ್ಲಿ ಹೆಚ್ಚಿನ ಕೋವಿಡ್-19 ಸೋಂಕಿತರು ಕಂಡು ಬಂದ ಹಿನ್ನೆಲೆ ವೈರಸ್ ಹರಡುವುದನ್ನು ತಡೆಯಲು ಆಡಳಿತ ಮಂಡಳಿಯು ಕಂಟೈನ್‌ಮೆಂಟ್ ವಲಯಗಳನ್ನು ಮಾಡಿದೆ. ಕ್ಯಾಂಪಸ್‌ನಲ್ಲಿ ಎಲ್ಲರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.