ನವದೆಹಲಿ: ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಭಟನೆ ತೀವ್ರಗೊಂಡಿದೆ. ನೂತನ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಧರಣಿ ಹೂಡಿದ್ರೆ, ಇತ್ತ ಸರ್ಕಾರವು ಕಾಯ್ದೆಗಳನ್ನು ಹಿಂಪಡೆಯುವ ಪ್ರಸ್ತಾಪ ಹೊರತು ಪಡಿಸಿ ಮತ್ಯಾವುದೇ ಬೇಡಿಕೆ ಇದ್ದರೂ ಪೂರೈಸುತ್ತೇವೆ ಎಂದಿದೆ. ಈ ಮಧ್ಯೆ ಇಂದು ಹೋರಾಟಗಾರರು ಹಾಗೂ ಸರ್ಕಾರದ ನಡುವೆ 8 ನೇ ಸುತ್ತಿನ ಮಾತುಕತೆ ನಡೆಯುತ್ತಿದೆ.
ವಿಜ್ಞಾನ ಭವನದಲ್ಲಿ ಸುಮಾರು 40 ಕ್ಕೂ ಹೆಚ್ಚು ರೈತ ಸಂಘಟನೆಗಳೊಂದಿಗೆ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪೀಯುಷ್ ಗೋಯಲ್ ಮತ್ತು ಸೋಮ್ ಪ್ರಕಾಶ್ ಸಭೆ ನಡೆಸುತ್ತಿದ್ದಾರೆ. ಡಿಸೆಂಬರ್ 30 ರಂದು ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ ವಿದ್ಯುತ್ ಹಾಗೂ ಕೃಷಿ ತ್ಯಾಜ್ಯ ಸುಡುವಿಕೆಗೆ ಸಂಬಂಧಿಸಿದಂತೆ ಸರ್ಕಾರ ಎರಡು ಬೇಡಿಕೆಗಳನ್ನು ಒಪ್ಪಿಕೊಂಡಿತ್ತು. ಆದರೆ, ಜನವರಿ 4 ರಂದು ನಡೆದ ಸಭೆಯಲ್ಲಿ ಯಾವುದೇ ರೀತಿ ಬೆಳವಣಿಗೆಗಳು ಕಂಡು ಬಂದಿರಲಿಲ್ಲ.