ಚೆನ್ನೈ, ತಮಿಳುನಾಡು : ತಮ್ಮ ಒಳ ಉಡುಪುಗಳಲ್ಲಿ ಚಿನ್ನವನ್ನು ಅಡಗಿಸಿ ಸಾಗಿಸುತ್ತಿದ್ದ ಆರೋಪದ ಮೇಲೆ 8 ಮಂದಿಯನ್ನು ತಮಿಳುನಾಡಿನ ಚೆನ್ನೈ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ ಬಂಧಿಸಲಾಗಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಸುಮಾರು 4.5 ಕೋಟಿ ರೂಪಾಯಿ ಮೌಲ್ಯದ 9 ಕಿಲೋಗ್ರಾಮ್ ಚಿನ್ನವನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಮೊದಲಿಗೆ ಅನುಮಾನಾಸ್ಪದ ವರ್ತನೆ ಹಿನ್ನೆಲೆ ಆರೋಪಿಗಳನ್ನು ತಪಾಸಣೆ ಮಾಡಲಾಯಿತು.