ಟೋಕಿಯೊ: ಮಾರಣಾಂತಿಕ ಕೊರೊನಾ ವೈರಸ್ ಪ್ರತಿಷ್ಟಿತ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಸಂಚಲನ ಮೂಡಿಸುತ್ತಿದೆ. ಈಗಾಗಲೇ ವಿವಿಧ ದೇಶಗಳ ಕ್ರೀಡಾಪಟುಗಳು ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿದ್ದಾರೆ. ಈ ಬೆನ್ನಲ್ಲೇ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಜಪಾನ್ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ.
ಟೋಕಿಯೊ ಒಲಿಂಪಿಕ್ಸ್-2020 ರಲ್ಲಿ ಎಲ್ಲರ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಭಾಗವಹಿಸುವ ಎಲ್ಲರೂ ಕೂಡ ಆರೋಗ್ಯದ ಜೊತೆಗೆ ಒಲಿಂಪಿಕ್ಸ್ ನಿಯಮಾವಳಿಗಳನ್ನು ಕಾಪಾಡಿಕೊಳ್ಳಬೇಕು ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಮನವಿ ಮಾಡಿದೆ. ಇನ್ನು ಜುಲೈ 1 ರಿಂದ 31 ರವರೆಗೆ ಒಟ್ಟು 448,815 ಮಂದಿಯನ್ನು ಸ್ಕ್ರೀನಿಂಗ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 90 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ ಎಂದು ಒಲಿಂಪಿಕ್ ಸಮಿತಿ ಮಾಹಿತಿ ನೀಡಿದೆ.