ನವದೆಹಲಿ: ದೇಶದ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 91,702 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ 1,34,580 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ. ಅಲ್ಲದೆ 24 ಗಂಟೆಯಲ್ಲಿ ಸೋಂಕಿನಿಂದ 3,403 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದಲ್ಲೀಗ ಕೋವಿಡ್ ಪ್ರಕರಣಗಳ ಸಂಖ್ಯೆ 2,92,74,823, ಸಾವಿನ ಸಂಖ್ಯೆ 3,63,079ಕ್ಕೆ ಏರಿಕೆಯಾಗಿದೆ.
ಇದಲ್ಲದೆ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 2,77,90,073ಕ್ಕೆ ಹೆಚ್ಚಳವಾಗಿದ್ದು, 11,21,671 ಕೇಸ್ಗಳು ಸಕ್ರಿಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಜೊತೆಗೆ 24,60,85,649 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.