ನವದೆಹಲಿ:ರಾಷ್ಟ್ರ ರಾಜಧಾನಿಯ ಎಎಪಿ ಸರ್ಕಾರ ಮತ್ತು ದೆಹಲಿ ಗವರ್ನರ್ ನಡುವೆ ಮತ್ತೊಂದು ಹಂತದ ಸಂಘರ್ಷ ಆರಂಭವಾಗಿದೆ. ಆಮ್ ಆದ್ಮಿ ಪಕ್ಷವು ಸರ್ಕಾರಿ ಜಾಹೀರಾತುಗಳೆಂದು ರಾಜಕೀಯ ಜಾಹೀರಾತುಗಳನ್ನು ಪ್ರಕಟಿಸಿದ್ದು, ಇದರ 97 ಕೋಟಿ ರೂಪಾಯಿ ಬಿಲ್ ಅನ್ನು ಆಮ್ ಆದ್ಮಿ ಪಕ್ಷದಿಂದ ವಸೂಲು ಮಾಡುವಂತೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
2015 ರ ಸುಪ್ರೀಂ ಕೋರ್ಟ್ ಆದೇಶಗಳು, 2016 ರ ದೆಹಲಿ ಹೈಕೋರ್ಟ್ ಆದೇಶ ಮತ್ತು 2016 ರ CCRGA ಆದೇಶವನ್ನು ಆಪ್ ಸರ್ಕಾರ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.