ಉಸ್ಮಾನಾಬಾದ್ (ಮಹಾರಾಷ್ಟ್ರ): 3ವರ್ಷದ ಅಪ್ರಾಪ್ತ ಬಾಲಕಿ ಮೇಲೆ 13 ವರ್ಷದ ಅಪ್ರಾಪ್ತ ಬಾಲಕ ಅತ್ಯಾಚಾರವೆಸಗಿರುವ ಆತಂಕಕಾರಿ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆಟವಾಡಲು ಮನೆಗೆ ಬಂದಿದ್ದ ವೇಳೆ ಆರೋಪಿ ಬಾಲಕ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ನಡೆದಿರುವ ಘಟನೆ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ.
ಕೂಡಲೇ ಪೋಷಕರು ಆನಂದನಗರ ಪೊಲೀಸ್ ಠಾಣೆಗೆ ತೆರಳಿ ಬಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪೊಲೀಸರು ಬಾಲಕನನ್ನು ಬಂಧಿಸಿ, ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಇನ್ನು ಬಾಲಕನ ವಿರುದ್ಧ ಪೋಕ್ಸೊ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.