ಪುರಿ(ಒಡಿಶಾ):ಕಾಮುಕ ತಂದೆಯೋರ್ವ ಎರಡು ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಒಡಿಶಾದ ಪುರಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ಮೇಲೆ ಕಾಮುಕ ತಂದೆ ದುಷ್ಕೃತ್ಯವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಬಾಲಕಿ ತಾಯಿ ಪೊಲೀಸ್ ಠಾಣೆಗೆ ತೆರಳಿ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಇದರ ಬೆನ್ನಲ್ಲೇ ಸೀ ಬೀಚ್ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗೊಳಪಡಿಸಿರುವುದಾಗಿ ತಿಳಿಸಿದ್ದಾರೆ.