ಪುಣೆ:ಮಹಾರಾಷ್ಟ್ರದ ಪುಣೆಯಲ್ಲಿ ಅಸಹ್ಯಕರ ಘಟನೆಯೊಂದು ಬೆಳಕಿಗೆ ಬಂದಿದೆ. ನಾಯಿಯನ್ನು ಅಸ್ವಾಭಾವಿಕವಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಪುಣೆಯ ಖೇಡ್ ತಾಲೂಕಿನಲ್ಲಿ ಈ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಪಕ್ಕದ ಮನೆಯವರ ನಾಯಿಗೆ ಆಹಾರ ನೀಡಿ ಆಗಾಗ ತನ್ನ ಮನೆಗೆ ಕರೆದೊಯ್ಯುತ್ತಿದ್ದ ಆ ವಿಕೃತಕಾಮಿ ಬಳಿಕ ಶ್ವಾನದ ಜೊತೆ ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದನಂತೆ.
ಇದನ್ನು ಸಂಕೀರ್ಣದ ಕೆಲವರು ನೋಡಿ ವಿಡಿಯೋ ಮಾಡಿದ್ದಾರೆ. ಈ ಬಗ್ಗೆ ನಾಯಿಯ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಎನ್ಜಿಒ ಸಹಾಯದಿಂದ ಪ್ರಾಣಿ ದಯಾ ಸಂಘಕ್ಕೆ ದೂರು ನೀಡಿದ್ದಾರೆ. ಬಳಿಕ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪೊಲೀಸರು ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ- 1960 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವೃದ್ಧನನ್ನು ಬಂಧಿಸಿದ್ದಾರೆ.
ಓದಿ:ಸ್ಪೆಷಲ್ ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರ: ಈ ರೀತಿಯ ಸುರಂಗ ನಿರ್ಮಿಸಲು ಗಡ್ಕರಿಗೆ ಮನವಿ