ನೆಲ್ಲೂರು, ಆಂಧ್ರಪ್ರದೇಶ :ಕಾರೊಂದು ನೋಡು ನೋಡುತ್ತಲೇ ಕೆಲವೇ ಕ್ಷಣಗಳಲ್ಲಿ ಬೆಂಕಿಗಾಹುತಿಯಾದ ಘಟನೆ ಆಂಧ್ರಪ್ರದೇಶ ನೆಲ್ಲೂರು ನಗರದ ಪೊದಲಕೂರು ಎಂಬಲ್ಲಿ ನಡೆದಿದೆ. ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಿಕ್ಕರ್ ಶಾಪ್ನ ಮುಂದೆ ನಿಂತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಶಂಕಿಸಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದರೂ, ಯಾವುದೇ ಪ್ರಯೋಜನವಾಗಲಿಲ್ಲ.