ಶೋಪಿಯಾನ್ (ಜಮ್ಮು ಮತ್ತು ಕಾಶ್ಮೀರ):ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಕಾಶ್ಮೀರಿ ಪಂಡಿತ ಸಹೋದರರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ ಮೃತ ವ್ಯಕ್ತಿ ಮತ್ತು ಗಾಯಾಳು ರಾಜ್ಯದ ಅಲ್ಪಸಂಖ್ಯಾತ(ಪಂಡಿತ) ಸಮುದಾಯಕ್ಕೆ ಸೇರಿದವರು. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಏತನ್ಮಧ್ಯೆ, ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿವೆ.
ಶೋಪಿಯಾನ್‌ನ ಚೋಟಿಪೋರಾ ಪ್ರದೇಶದ ಸೇಬಿನ ತೋಟದಲ್ಲಿ ನಾಗರಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇಬ್ಬರೂ ಪಂಡಿತ ಸಮುದಾಯಕ್ಕೆ ಸೇರಿದವರು. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ. @JmuKmrPolice ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.