ನವದೆಹಲಿ:ಬಾಂಗ್ಲಾದೇಶದಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದ ನಂತರ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಅಪರಾಧಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಬಾಂಗ್ಲಾದಲ್ಲಿ ಮರಣದಂಡನೆ ಶಿಕ್ಷೆ: ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಅಪರಾಧಿ ಪೊಲೀಸ್ ವಶಕ್ಕೆ - ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಅಪರಾಧಿ ಪೊಲೀಸ್ ವಶಕ್ಕೆ
ಬಾಂಗ್ಲಾದೇಶದಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದ ನಂತರ ಅಕ್ರಮವಾಗಿ ಭಾರತ ಪ್ರವೇಶಿಸಿ 2010 ರಿಂದ ದೇಶದಲ್ಲಿ ವಾಸ ಮಾಡುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಬಾಂಗ್ಲಾದಲ್ಲಿ ಮರಣದಂಡನೆ ಶಿಕ್ಷೆ
ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ಅಪರಾಧ ವಿಭಾಗ, ಬಾಂಗ್ಲಾದೇಶದಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿದ ನಂತರ ಅಕ್ರಮವಾಗಿ ಭಾರತ ಪ್ರವೇಶಿಸಿದ್ದ ಅಪರಾಧಿಯನ್ನು ದೆಹಲಿಯ ಖಾನ್ಪುರಲ್ಲಿ ಅಪರಾಧ ಶಾಖೆಯ ಎಸ್ಟಿಎಫ್ ತಂಡ ಬಂಧಿಸಿದೆ ಎಂದು ಹೇಳಿದೆ.
ಬಂಧಿತನಿಂದ ಲೋಡೆಡ್ ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ. ಈತ 2010 ರಿಂದ ಭಾರತದಲ್ಲಿ ವಾಸಿಸುತ್ತಿದ್ದ. ಈ ಬಗ್ಗೆ ಬಾಂಗ್ಲಾದೇಶದ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.