ಕರ್ನಾಟಕ

karnataka

ETV Bharat / bharat

ಸರ್ಕಾರದಿಂದ ಮತದಾರರ ಮಾಹಿತಿಗೆ ಕನ್ನ ಆರೋಪ.. ಚುನಾವಣಾ ಆಯೋಗ ಭೇಟಿ ಮಾಡಿದ ರಾಜ್ಯ ಕಾಂಗ್ರೆಸ್​ ನಾಯಕರು

ಹಿರಿಯ ಕಾಂಗ್ರೆಸ್​ ನಾಯಕರ ನಿಯೋಗ ಇಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಮತದಾರರ ಮಾಹಿತಿ ಕಳ್ಳತನ ಆರೋಪದ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಕಾಂಗ್ರೆಸ್​ ನಾಯಕರ ನಿಯೋಗ
ಕಾಂಗ್ರೆಸ್​ ನಾಯಕರ ನಿಯೋಗ

By

Published : Nov 24, 2022, 1:20 PM IST

Updated : Nov 24, 2022, 1:45 PM IST

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ನಿಯೋಗ ಗುರುವಾರ ನಿರ್ವಚನ ಸದನದಲ್ಲಿ ಭಾರತೀಯ ಚುನಾವಣಾ ಆಯೋಗವನ್ನು ಭೇಟಿ ಮಾಡಿತು.

ಚುನಾವಣಾ ಆಯೋಗ ಭೇಟಿ ಮಾಡಿದ ರಾಜ್ಯ ಕಾಂಗ್ರೆಸ್​ ನಾಯಕರು

ಈ ನಿಯೋಗದಲ್ಲಿ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಂ ಬಿ ಪಾಟೀಲ್, ವಿಧಾನ ಪರಿಷತ್​ ಸದಸ್ಯ ನಜೀರ್ ಅಹಮದ್, ಕಾಂಗ್ರೆಸ್​ ವಕ್ತಾರ ಪ್ರಿಯಾಂಕ್ ಖರ್ಗೆ, ನಾಸೀರ್ ಹುಸೇನ್, ಪ್ರಣವ್ ಝಾ, ವಿನೀತ್ ಪುನಿಯಾ ಇದ್ದರು.

ಚಿಲುಮೆ ಎಜುಕೇಶನ್ ಇನ್ಸ್‌ಟಿಟ್ಯೂಟ್ ಎಂಬ ಸಂಸ್ಥೆಯ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳ್ಳತನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಇದನ್ನೂ ಓದಿ:ಮತದಾರರ ಮಾಹಿತಿ ಕಳ್ಳತನ ಆರೋಪ: ಸಮಗ್ರ ತನಿಖೆಗೆ ಸಿಎಂ ಸೂಚನೆ

Last Updated : Nov 24, 2022, 1:45 PM IST

ABOUT THE AUTHOR

...view details