ಜೈಪುರ(ರಾಜಸ್ಥಾನ): ಚಿಕಿತ್ಸೆ ಪಡೆದುಕೊಳ್ಳಲು ಕ್ಲಿನಿಕ್ಗೆ ಬಂದ ಅನಾರೋಗ್ಯ ಪೀಡಿತ ಮಹಿಳೆಯೋರ್ವಳ ಮೇಲೆ ಕಾಮುಕ ವೈದ್ಯ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಜೈಪುರದ ಕರ್ಧಾನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಚಿಕಿತ್ಸೆ ಪಡೆದುಕೊಳ್ಳಲು ಬಂದಿದ್ದ ತನಗೆ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿರುವ ವೈದ್ಯ ದುಷ್ಕೃತ್ಯವೆಸಗಿದ್ದಾರೆಂದು ಸಂತ್ರಸ್ತೆ ಆರೋಪಿಸಿದ್ದಾರೆ. ಮಹಿಳೆಗೆ ಪ್ರಜ್ಞೆ ಬಂದ ಬಳಿಕ ಮನೆಗೆ ತೆರಳಿ ಕುಟುಂಬಸ್ಥರ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ. ಜೂನ್ 27ರಂದು ಈ ಘಟನೆ ನಡೆದಿದೆ ಎನ್ನಲಾಗ್ತಿದೆ.