ಕರ್ನಾಟಕ

karnataka

ETV Bharat / bharat

ಸರ್ಕಾರಿ ನೌಕರ ಮತ್ತು ಸಹಚರರಿಂದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ.. - ಈಟಿವಿ ಭಾರತ ಕನ್ನಡ

ಸರ್ಕಾರಿ ನೌಕರ ಮತ್ತು ಆತನ ಸಹಚರರು ಅಪ್ರಾಪ್ತ ಬಾಲಕಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

up_mah_01_g
ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

By

Published : Oct 6, 2022, 5:46 PM IST

ಮಹೋಬಾ/ಉತ್ತರಪ್ರದೇಶ: ಜಿಲ್ಲೆಯ ಖನ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರ ಯುವಕರ ಗುಪೊಂದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಬಾಲಕಿಯನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಖನ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿ ದಿನಸಿ ಖರೀದಿಸಲು ಕಿರಾಣಿ ಅಂಗಡಿಗೆ ತೆರಳಿದ್ದಳು. ಈ ವೇಳೆ, ಮೂವರು ಯುವಕರ ಗುಂಪೊಂದು ಬಾಲಕಿಯನ್ನ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಬಳಿಕ ಬಾಲಕಿಯನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇನ್ನು ಬಾಲಕಿ ಮನೆಗೆ ಬಾರದೇ ಇದ್ದ ಹಿನ್ನೆಲೆ ಗಾಬರಿಗೊಂಡ ಪೋಷಕರು ಬಾಲಕಿಯ ಹುಡುಕಾಟಕ್ಕೆ ಮುಂದಾಗಿದ್ದರೆ. ನಿರಂತರ ಹುಡುಕಾಟದ ಬಳಿಕ ನಿರ್ಜನ ಪ್ರದೇಶವೊಂದರಲ್ಲಿ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೆ ಬಾಲಕಿಯನ್ನ ಪೋಷಕರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ನಂತರ ಬಾಲಕಿಗೆ ಪ್ರಜ್ಞೆ ಬಂದಿದ್ದು, ಬಳಿಕ ನಡೆದಿರುವ ಘಟನೆ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ.

ಈ ಕುರಿತು ಬಾಲಕಿಯ ಸಹೋದರ, ಖನ್ನಾ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಮೇರೆಗೆ, ತನಿಖೆ ಆರಂಭಿಸಿದ ಪೊಲೀಸರು ಗ್ರಾಮದ ಮೂವರು ನಿವಾಸಿಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಮೂವರು ಆರೋಪಿಗಳ ಗುಂಪಿನಲ್ಲಿ ಒಬ್ಬ ಸರ್ಕಾರಿ ನೌಕರ ಇದ್ದು ಆತನೇ ತನ್ನ ಸಹಚರರೊಂದಿಗೆ ಸೇರಿ ಕೃತ್ಯ ಎಸಗಿದ್ದಾನೆ ಎಂದು ಪ್ರಥಮ ಹಂತದ ತನಿಖೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಇದನ್ನೂ ಓದಿ:ಹಗಲಲ್ಲೇ ಮನೆಗೆ ನುಗ್ಗಿ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ..​ ಕತ್ತು ಹಿಸುಕಿ ಕೊಂದ ದುರುಳ

ABOUT THE AUTHOR

...view details