ಡುಂಗರ್‌ಪುರ(ರಾಜಸ್ಥಾನ): ರಾಜಸ್ಥಾನದ ಆಸ್ಪುರ್ ಪೊಲೀಸರು ಭಾರಿ ಸ್ಫೋಟಕಗಳನ್ನು ಪತ್ತೆ ಹಚ್ಚಿದ್ದಾರೆ. 186 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದು, ಭಾರಿ ಪ್ರಮಾಣದ ಅನಾಹುತವಾಗುವ ಪತ್ತೆ ಹಚ್ಚಿ ಉತ್ತಮ ಕೆಲಸ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಫೋಟಕಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳವಾರ ಸಂಜೆ ಗಡ ನಾಥಾಜಿ ಗ್ರಾಮದ ಕೆಲವರು ಭಬರಾನ ಸೇತುವೆಯ ಮೂಲಕ ಹಾದು ಹೋಗುತ್ತಿದ್ದರು. ಆ ಸಮಯದಲ್ಲಿ ಸೇತುವೆಯ ಕೆಳಗಿರುವ ಸೋಮ್ ನದಿಯಲ್ಲಿ ಕೆಲವು ರಟ್ಟಿನ ಪೆಟ್ಟಿಗೆಗಳು ಕಂಡು ಬಂದಿದ್ದವು. ತಕ್ಷಣ ಕೆಲವರು ಆಸ್ಪುರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಈ ಮಾಹಿತಿ ಆಧರಿಸಿ ಆಸ್ಪುರ್ ಪೊಲೀಸ್ ಅಧಿಕಾರಿ ಸವಾಯಿ ಸಿಂಗ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದೆವು ಎಂದು ಆಸ್ಪುರ್ ಎಸ್‌ಎಚ್‌ಒ ಸವಾಯಿ ಸಿಂಗ್ ಮಾಹಿತಿ ನೀಡಿದ್ದಾರೆ.