ಹೈದರಾಬಾದ್ (ತೆಲಂಗಾಣ): ಹೈದರಾಬಾದ್‌ನ ಗೋಲ್ಕೊಂಡದಲ್ಲಿ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಜರುಗಿದೆ.
ಆಸ್ತಿ ವಿಚಾರಕ್ಕಾಗಿ ವ್ಯಕ್ತಿಯೊಬ್ಬ ತನ್ನ ಸಹೋದರನನ್ನು ಹತ್ಯೆ ಮಾಡಿದ್ದಾನೆ. ಶೇಖ್ಪೇಟ್ ನಿವಾಸಿಗಳಾದ ವಿಜಯ್ ಮತ್ತು ನರೇಂದರ್ ಸಹೋದರರ ಮಧ್ಯೆ ಕೆಲವು ದಿನಗಳಿಂದ ಆಸ್ತಿ ವಿಚಾರವಾಗಿ ವೈಮನಸ್ಸು ಉಂಟಾಗಿತ್ತು. ಇದೇ ವಿಚಾರವಾಗಿ ಮಂಗಳವಾರ ರಾತ್ರಿ ಇಬ್ಬರ ನಡುವೆ ವಾಗ್ವಾದ ಆರಂಭವಾಗಿದೆ. ಇಬ್ಬರ ನಡುವಿನ ಜಗಳ ತಾರಕಕ್ಕೇರಿದ್ದು, ನರೇಂದರ್ ತನ್ನ ಸಹೋದರ ವಿಜಯ್ ಮೇಲೆ ಹಲ್ಲೆ ನಡೆಸಿದ್ದಾನೆ.