ವನಪರ್ತಿ(ತೆಲಂಗಾಣ) : ಜಿಲ್ಲೆಯ ನಾಗವಾರಂನಲ್ಲಿ ವ್ಯಕ್ತಿಯೊಬ್ಬನ ಕುತ್ತಿಗೆಗೆ ಎಮ್ಮೆಯ ಬಾಲ ಸುತ್ತಿಕೊಂಡು ಮೃತಪಟ್ಟಿದ್ದಾನೆ. ಬಂಡಾರು ನಗರದ ನಿವಾಸಿ ಗುಮ್ಮಡಂ ಬಾಲರೆಡ್ಡಿ ಮೃತ ದುರ್ದೈವಿ. ಎಮ್ಮೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾಗ ಕುತ್ತಿಗೆಗೆ ಬಲವಾಗಿ ಬಾಲ ಸುತ್ತಿಕೊಂಡಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಎಮ್ಮೆಗೆ ಲೈಂಗಿಕ ಕಿರುಕುಳ.. ಬಾಲ ಸುತ್ತಿಕೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ..! - ತೆಲಂಗಾಣದ ವನಪರ್ತಿ ಜಿಲ್ಲೆ
ಅವರ ಮಾನಸಿಕ ಸ್ಥಿತಿ ಸರಿಯಿರಲಿಲ್ಲ. ಕುಟುಂಬದಿಂದ ದೂರಾಗಿ, ಹಲವಾರು ಪ್ರಾಣಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಪತ್ನಿಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ..
ಸ್ಥಳೀಯರು ಈ ದೃಶ್ಯ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಸಿಐ ಪ್ರವೀಣ್ ಕುಮಾರ್ ಮತ್ತು ಸಿಬ್ಬಂದಿ ಪರಿಶೀಲಿಸಿದರು. ಮೃತವ್ಯಕ್ತಿಯ ಮೈಮೇಲೆ ಬಟ್ಟೆಗಳಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಮ್ಮೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸುತ್ತಿದ್ದಾಗ ಆತನ ಕೊರಳಿಗೆ ಬಾಲ ಸುತ್ತಿಕೊಂಡು ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಅವರ ಮಾನಸಿಕ ಸ್ಥಿತಿ ಸರಿಯಿರಲಿಲ್ಲ. ಕುಟುಂಬದಿಂದ ದೂರಾಗಿ, ಹಲವಾರು ಪ್ರಾಣಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಪತ್ನಿಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.