ಕರ್ನಾಟಕ

karnataka

ETV Bharat / bharat

ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡು ಸಾವು - ಅಮರಾವತಿ ಇತ್ತೀಚಿನ ನ್ಯೂಸ್​

17 ವರ್ಷದ ಬಾಲಕಿ ವ್ಯಕ್ತಿಯೋರ್ವನಿಂದ ಕಳೆದ ಕೆಲ ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದಳು. ಹೀಗಾಗಿ, ಆಕೆ 7 ತಿಂಗಳ ಗರ್ಭಿಣಿಯಾಗಿದ್ದಳು ಎಂದು ತಿಳಿದು ಬಂದಿದೆ. ಗರ್ಭಿಣಿಯಾಗುತ್ತಿದ್ದಂತೆ ಮಾನಹಾನಿಯಾಗುವ ಭಯದಿಂದ ಈ ನಿರ್ಧಾರ ಕೈಗೊಂಡಿದ್ದಾಳೆಂದು ಹೇಳಲಾಗುತ್ತಿದೆ..

minor victim suicide
minor victim suicide

By

Published : Sep 11, 2021, 6:15 PM IST

Updated : Sep 11, 2021, 6:44 PM IST

ಅಮರಾವತಿ(ಮಹಾರಾಷ್ಟ್ರ) :ಕಾಮುಕ ವ್ಯಕ್ತಿಯಿಂದ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿಯೋರ್ವಳು ಮಾನಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಹಂಚಿಕೊಂಡ ದಿಲೀಪ್​ ಪಾಟೀಲ್

17 ವರ್ಷದ ಬಾಲಕಿ ವ್ಯಕ್ತಿಯೋರ್ವನಿಂದ ಕಳೆದ ಕೆಲ ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದಳು. ಹೀಗಾಗಿ, ಆಕೆ 7 ತಿಂಗಳ ಗರ್ಭಿಣಿಯಾಗಿದ್ದಳು ಎಂದು ತಿಳಿದು ಬಂದಿದೆ. ಗರ್ಭಿಣಿಯಾಗುತ್ತಿದ್ದಂತೆ ಮಾನಹಾನಿಯಾಗುವ ಭಯದಿಂದ ಈ ನಿರ್ಧಾರ ಕೈಗೊಂಡಿದ್ದಾಳೆಂದು ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಅತ್ಯಾಚಾರಕ್ಕೆ ವಿರೋಧ: 15ರ ಬಾಲೆ ಮೇಲೆ ಮಾರಣಾಂತಿಕ ಹಲ್ಲೆ, ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

ಅಮರಾವತಿ ಜಿಲ್ಲೆಯ ದರ್ಯಾಪುರದ ಯೆವ್ಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಳ್ಳುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಈಗಾಗಲೇ ಆರೋಪಿಯನ್ನ ಬಂಧಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ಸಹಾಯಕ ಪೊಲೀಸ್​​​ ಇನ್ಸ್​ಪೆಕ್ಟರ್​​​ ದಿಲೀಪ್​ ಪಾಟೀಲ್​ ತಿಳಿಸಿದ್ದಾರೆ.

ದರ್ಯಾಪುರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ ನಿನ್ನೆಯಷ್ಟೇ ಕೆಲ ಕಾಮುಕರು ಮಹಿಳೆಯೋರ್ವಳ ಮೇಲೆ ಅತ್ಯಾಚಾರವೆಸಗಿ, ಖಾಸಗಿ ಭಾಗದಲ್ಲಿ ರಾಡ್ ಹಾಕಿದ್ದ ಘಟನೆ ನಡೆದಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಂತ್ರಸ್ತೆ ಸಾವನ್ನಪ್ಪಿದ್ದಾಳೆ. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.

Last Updated : Sep 11, 2021, 6:44 PM IST

ABOUT THE AUTHOR

...view details