ಅಹಮದಾಬಾದ್ (ಗುಜರಾತ್): ಗುಜರಾತ್ನಲ್ಲಿ ಓಮಿಕ್ರಾನ್ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾಗಿದ್ದು, ರೋಗಿಯ ಜೀನೋಮ್ ಸೀಕ್ವೆನ್ಸಿಂಗ್ಗೆ ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ.
ಅಹಮದಾಬಾದ್ ಮತ್ತು ವಡೋದರಾದಲ್ಲಿ ಓಮಿಕ್ರಾನ್ ಹೊಸ ಬಿಎಫ್ 7 ರೂಪಾಂತರವು ಪತ್ತೆಯಾಗಿದೆ. ಇದು ಚೀನಾದಲ್ಲಿ ಪ್ರಸ್ತುತ ವರದಿಯಾಗಿರುವ ರೂಪಾಂತರದ ಪ್ರಕರಣವಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ. ರೋಗಿಗಳಿಗೆ ಮನೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಾಗಲೇ ಮುನ್ನಚ್ಚರಿಕೆಗಳನ್ನು ವಹಿಸಿವೆ. ಗುಜರಾತ್ನಲ್ಲಿ ಆರೋಗ್ಯ ಸಚಿವ ರಿಷಿಕೇಶ್ ಪಟೇಲ್ ಅಧ್ಯಕ್ಷತೆಯಲ್ಲಿ ಸಭೆ ಕೂಡ ನಡೆಸಲಾಗಿದ್ದು, ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿಯ ಕುರಿತು ಚರ್ಚಿಸಲಾಗಿದೆ.
ಇದಲ್ಲದೆ, ರಾಜ್ಯದಲ್ಲಿ ಆಕ್ಸಿಜನ್, ಔಷಧ, ಕೋವಿಡ್ ಕೇರ್ ಸೆಂಟರ್, ಲಸಿಕೆ ಮುಂತಾದ ಸೌಲಭ್ಯಗಳ ಲಭ್ಯ ಹಾಗೂ ನಗರ ಪ್ರದೇಶಗಳು ಮತ್ತು ಜಿಲ್ಲೆಗಳಲ್ಲಿ ಆರೋಗ್ಯ ಸೌಲಭ್ಯಗಳ ಬಗ್ಗೆಯೂ ಚರ್ಚಿಸಲಾಗಿದೆ.
ಇದನ್ನೂ ಓದಿ:ಕೋವಿಡ್ ಇನ್ನೂ ಮುಗಿದಿಲ್ಲ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಅಗತ್ಯವೆಂದ ಕೇಂದ್ರ