ಸೂರತ್(ಗುಜರಾತ್):ಮುಂಬೈ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ರಾತ್ರಿ ಸಂಭವಿಸಿರುವ ಅಪಘಾತದ ವಿಡಿಯೋವೊಂದು ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಘಟನೆ ಇದಾಗಿದೆ.
ಟೆಂಪೊ - ಕಾರಿನ ನಡುವೆ ಈ ಅಪಘಾತ ಸಂಭವಿಸಿದ್ದು, ಈ ವೇಳೆ ಸುಮಾರು 100 ಮೀಟರ್ ದೂರ ಕಾರನ್ನ ಟೆಂಪೊವೊಂದು ಎಳೆದೊಯ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಸಾವು - ನೋವು ಸಂಭವಿಸಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರಕರಣ ಸಹ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.