ಕರ್ನಾಟಕ

karnataka

ETV Bharat / bharat

ಜಮ್ಮು ಕಾಶ್ಮೀರದ ಅನಂತನಾಗ್‌ನಲ್ಲಿ ಸೇನೆ-ಭಯೋತ್ಪಾದಕರ ನಡುವೆ ಗುಂಡಿನ ಕಾಳಗ : ಓರ್ವ ಉಗ್ರನ ಹತ್ಯೆ - ಅರ್ವಾನಿ ಪ್ರದೇಶದ ಸೇನಾ ಶೋಧ ಕಾರ್ಯಾಚರಣೆ

ಮುಮನ್‌ಹಾಲ್ ಪ್ರದೇಶದಲ್ಲಿ ಉಗ್ರರು ಇರುವ ಕುರಿತು ಗುಪ್ತಚರ ಇಲಾಖೆಗೆ ಮಾಹಿತಿ ಸಿಕ್ಕಿದ್ದು, ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಸೇನೆಯು ಪ್ರದೇಶವನ್ನು ಸಂಪೂರ್ಣ ಸುತ್ತುವರಿದಿದೆ..

encounter
encounter

By

Published : Dec 24, 2021, 9:40 AM IST

ಅನಂತನಾಗ್‌: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿರುವ ಅರ್ವಾನಿ ಪ್ರದೇಶದ ಮುಮನ್‌ಹಾಲ್​ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ ನಡೆಯುತ್ತಿದೆ. ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಕಾಶ್ಮೀರ ವಲಯ ಪೊಲೀಸರು, ಮುಮನ್‌ಹಾಲ್ ಪ್ರದೇಶದಲ್ಲಿ ಉಗ್ರರು ಇರುವ ಕುರಿತು ಗುಪ್ತಚರ ಇಲಾಖೆಗೆ ಮಾಹಿತಿ ಸಿಕ್ಕಿದ್ದು, ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಸೇನೆಯು ಪ್ರದೇಶವನ್ನು ಸಂಪೂರ್ಣ ಸುತ್ತುವರಿದಿದೆ.

ಈ ಸಮಯದಲ್ಲಿ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ. ಪ್ರತ್ಯುತ್ತರವಾಗಿ ಭದ್ರತಾ ಪಡೆ ಸಹ ಗುಂಡು ಹಾರಿಸಿ ಓರ್ವ ಉಗ್ರನನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದೆ.

ಕಳೆದ ಮಂಗಳವಾರ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕರ ನಾಲ್ವರು ಸಹಚರರನ್ನು ಬಂಧಿಸಿದ್ದರು.

ಜುಬೇರ್ ಗುಲ್, ಆದಿಲ್ ಫಯಾಜ್ ಘನಿ, ಬಸಿತ್ ಅಲಿ ಮತ್ತು ಶಾಹಿದ್ ನಬಿ ಪಂಡಿತ್ ಬಂಧಿತ ಆರೋಪಿಗಳು. ಇವರು ಅವಂತಿಪೋರಾ ಮತ್ತು ಪಾಂಪೋರ್ ಪ್ರದೇಶಗಳಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡಿದ್ದರು ಎಂದು ತಿಳಿದು ಬಂದಿದೆ.

ABOUT THE AUTHOR

...view details