ಚಮೋಲಿ (ಉತ್ತರಾಖಂಡ):ಫೆಬ್ರವರಿ 7ರಂದು ಉತ್ತರಾಖಂಡದ ಚಮೋಲಿಯಲ್ಲಿ ಹಿಮಸ್ಫೋಟಿಸಿ ಉಂಟಾದ ಪ್ರವಾಹದಲ್ಲಿ ಸಾವನ್ನಪ್ಪಿದ್ದರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
ಜೋಶಿಮಠದ ತಪೋವನ ಸುರಂಗ, ರೇನಿ ಗ್ರಾಮ ಸೇರಿ ಚಮೋಲಿಯಲ್ಲಿ ಈವರೆಗೆ ಒಟ್ಟು 54 ಮೃತದೇಹಗಳು ಪತ್ತೆಯಾಗಿವೆ. 179 ಮಂದಿ ನಾಪತ್ತೆಯಾಗಿರುವುದಾಗಿ ಜೋಶಿಮಠ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ಚಮೋಲಿ ಪೊಲೀಸರು ತಿಳಿಸಿದ್ದಾರೆ.