ಮಹಾರಾಷ್ಟ್ರ: ಖಾಸಗಿ ಬಸ್ಗೆ ಹಿಂಬದಿಯಿಂದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸಾವನ್ನಪ್ಪಿ, 10 ಜನ ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಮದುವೆ ಸಮಾರಂಭ ಮುಗಿಸಿ ಸಿಂಧುದುರ್ಗದಿಂದ ಶಹಪುರಕ್ಕೆ 35 ಪ್ರಯಾಣಿಕರೊಂದಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಂಟೈನರ್ ಟ್ರಕ್ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಬಸ್ನಿಂದ ಕೆಳಕ್ಕೆ ಬಿದ್ದು, ಟ್ರಕ್ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.