ವಿಜಯವಾಡ (ಆಂಧ್ರ ಪ್ರದೇಶ): ಮಹಿಳೆಯೊಬ್ಬಳನ್ನು ಕೊಠಡಿಯೊಂದರಲ್ಲಿ ಬಂಧಿಸಿಟ್ಟು ನಾಲ್ವರು ಕಾಮುಕರು ಮೂರು ದಿನಗಳ ಕಾಲ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ವಿಜಯವಾಡದಲ್ಲಿ ನಡೆದಿದೆ. ಸದ್ಯ ಸಂತ್ರಸ್ತೆ ವಿಜಯವಾಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದ ಬೆಂಜ್ ಸರ್ಕಲ್ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು, ಡಿ.17ರಂದು ಅದೇ ಪ್ರದೇಶದ ಸುಲಭ್ ಕಾಂಪ್ಲೆಕ್ಸ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಾನೂರಿನ ಸನತನಗರದ ಕೊಠಡಿಗೆ ಕರೆದೊಯ್ದಿದ್ದಾರೆ. ಅಲ್ಲಿ ಇತರ ಮೂವರು ಸ್ನೇಹಿತರ ಜೊತೆ ಸೇರಿ ಕುಡಿದ ಅಮಲಿನಲ್ಲಿ ಮೂರು ದಿನಗಳ ಕಾಲ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಸೋಮವಾರ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.