ಪಲ್ನಾಡು (ಆಂಧ್ರಪ್ರದೇಶ): ಸ್ಥಳೀಯ ರೈಲ್ವೆ ನಿಲ್ದಾಣದಲ್ಲಿ 2 ವರ್ಷದ ಮಗನ ಎದುರೇ ಮಹಿಳೆಯೊಬ್ಬರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಪಲ್ನಾಡು ಜಿಲ್ಲೆಯ ಗುರಜಾಲ ಪಟ್ಟಣದಲ್ಲಿ ಅಪರಿಚಿತ ಮಹಿಳೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ರಕ್ತಸ್ರಾವವಾಗಿ ಬಿದ್ದಿದ್ದ ಮಹಿಳೆಯನ್ನು ಕಂಡ ಸ್ಥಳೀಯರು ಕೂಡಲೇ ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಮಹಿಳೆಯ ಪಕ್ಕದಲ್ಲಿ ಎರಡು ವರ್ಷದ ಬಾಲಕ ಇದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಹಿಳೆ ಆಘಾತಕ್ಕೊಳಗಾಗಿದ್ದಳು. ಯಾವುದೇ ವಿವರಗಳನ್ನು ನೀಡಲು ಸಾಧ್ಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇಬ್ಬರು ಪುರುಷರು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆಂದಷ್ಟೇ ಆಕೆ ಹೇಳಿದ್ದಾಳೆ. ವೈದ್ಯಕೀಯ ಪರೀಕ್ಷೆಯ ನಂತರ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ.