ನವದೆಹಲಿ: ಕೋವಿಡ್ ಲಸಿಕೆಗಾಗಿ CO-WIN ಪೋರ್ಟಲ್‌ನಲ್ಲಿ ಆಧಾರ್ ಕಾರ್ಡ್ ವಿವರಗಳನ್ನು ಸಲ್ಲಿಸುವುದು ಕಡ್ಡಾಯ ಪೂರ್ವ ಷರತ್ತಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಕೆಲವು ಕೇಂದ್ರಗಳು ವ್ಯಾಕ್ಸಿನೇಷನ್‌ಗಾಗಿ ಆಧಾರ್ ಕಾರ್ಡ್‌ಗೆ ಒತ್ತಾಯಿಸುತ್ತಿವೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಮತ್ತು ಸೂರ್ಯ ಕಾಂತ್ ಅವರ ಪೀಠವು ಕೋವಿಡ್ ಲಸಿಕೆ ನೀಡಿಕೆ ವೇಳೆ ಗುರುತಿನ ಏಕೈಕ ಪುರಾವೆಯಾಗಿ ಆಧಾರ್ ಕಾರ್ಡ್ ಅನ್ನು ಒದಗಿಸುವಂತೆ ಒತ್ತಾಯಿಸಬೇಡಿ ಎಂದು ಹೇಳಿದೆ.
ಇನ್ಮುಂದೆ ಕೋವಿಡ್ ಲಸಿಕೆ ಪಡೆಯಲು CO-WIN ಪೋರ್ಟಲ್‌ನಲ್ಲಿ ಆಧಾರ್ ಕಡ್ಡಾಯವಲ್ಲ
ಕೋವಿಡ್-19 ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಆಧಾರ್ ಕಡ್ಡಾಯವಲ್ಲ
ಆಧಾರ್ ವಿವರ ದಾಖಲಿಸುವುದು ವ್ಯಾಕ್ಸಿನೇಷನ್ ಪಡೆಯಲು ಕಡ್ಡಾಯವಲ್ಲ. ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಮತದಾರರ ಚೀಟಿ, ಪಡಿತರ ಚೀಟಿ ಸೇರಿದಂತೆ ಒಂಬತ್ತು ಗುರುತಿನ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಬಹುದು. ಎಲ್ಲ ಸಂಬಂಧಿತ ಅಧಿಕಾರಿಗಳು ಆರೋಗ್ಯ ಸಚಿವಾಲಯದ ನೀತಿಗೆ ಅನುಸಾರವಾಗಿ ಕಾರ್ಯನಿರ್ವಹಿಸಬೇಕು ಎಂದು ಪೀಠವು ಸೂಚಿಸಿದೆ.
ಓದಿ:ನನ್ನ ಮಗು ಅಲ್ಲ ಎಂದು ಶಾಸಕರು ಮನೆ ದೇವರ ಮೇಲೆ ಆಣೆ ಮಾಡಲಿ: ಸಂತ್ರಸ್ತೆ ಗಂಭೀರ ಆರೋಪ