ಕರ್ನಾಟಕ

karnataka

ETV Bharat / bharat

ಪ್ರಧಾನಿ ಮೋದಿ ವಿರುದ್ಧ ವಿವಾದಿತ ಹೇಳಿಕೆ: ಗುಜರಾತ್​ನ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಪೊಲೀಸ್​ ವಶಕ್ಕೆ

ದೆಹಲಿಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಕಚೇರಿಯಲ್ಲಿದ್ದ ಗುಜರಾತ್​ನ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

AAP's Gujarat chief Gopal Italia detained by Delhi Police
ಪ್ರಧಾನಿ ಮೋದಿ ವಿರುದ್ಧ ವಿವಾದಿತ ಹೇಳಿಕೆ: ಗುಜರಾತ್​ನ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಪೊಲೀಸ್​ ವಶಕ್ಕೆ

By

Published : Oct 13, 2022, 4:06 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್​ನ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮಹಿಳೆಯರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಗೋಪಾಲ್ ಇಟಾಲಿಯಾ ಅವರಿಗೆ ಸಮನ್ಸ್ ನೀಡಿತ್ತು. ಇದರ ಹಿನ್ನೆಲೆಯಲ್ಲಿ ಗುರುವಾರ ಗೋಪಾಲ್ ಇಟಾಲಿಯಾ ಮಹಿಳಾ ಆಯೋಗ ಕಚೇರಿಗೆ ಬಂದಿದ್ದರು. ಈ ವೇಳೆ ದೆಹಲಿ ಪೊಲೀಸರ ತಂಡ ಆಗಮಿಸಿ ಗೋಪಾಲ್ ಇಟಾಲಿಯಾ ವಶಕ್ಕೆ ಪಡೆದು ಅವರನ್ನು ಆಗ್ನೇಯ ದೆಹಲಿಯ ಸರಿತಾ ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಐಎಎಸ್ ಅಧಿಕಾರಿ ಬಂಧನ, ಜಿಲ್ಲಾಧಿಕಾರಿ ಮನೆಗೆ ಇಡಿ ಸೀಲ್​

ಸದ್ಯಕ್ಕೆ ಗೋಪಾಲ್ ಇಟಾಲಿಯಾ ವಶಕ್ಕೆ ಪಡೆದಿರುವ ಕುರಿತಾಗಿ ಅಧಿಕಾರಿಗಳು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇತ್ತೀಚೆಗೆ ಗೋಪಾಲ್ ಇಟಾಲಿಯಾ ಅವರು ಎರಡು ಹಳೆಯ ವಿಡಿಯೋಗಳು ವೈರಲ್​ ಆಗಿದ್ದವು. ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರದ್ದು ನೀಚ ರಾಜಕೀಯ ಎಂದು ಟೀಕಿಸಿದ್ದರು. ಇನ್ನೊಂದು ವಿಡಿಯೋದಲ್ಲಿ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಸೆರೆಯಾಗಿತ್ತು.

ಇದನ್ನೂ ಓದಿ:ಆರ್‌ಎಸ್‌ಎಸ್ ಮುಖ್ಯಸ್ಥರ ಭೇಟಿ ಬಳಿಕ ಬೆದರಿಕೆ: ಇಮಾಮ್ ಉಮರ್ ಅಹ್ಮದ್​ ಇಲ್ಯಾಸಿಗೆ ವೈ+ ಭದ್ರತೆ

ABOUT THE AUTHOR

...view details